ಅಭಿಪ್ರಾಯ / ಸಲಹೆಗಳು

ಕರ್ನಾಟಕ ಪಬ್ಲಿಕ್ ಸ್ಕೂಲ್

ಕರ್ನಾಟಕ ಪಬ್ಲಿಕ್ ಸ್ಕೂಲ್

  ಕರ್ನಾಟಕ ಸರಕಾರದ ಮಹತ್ವಕಾಂಕ್ಷಿ ಯೋಜನೆಯಂತೆ ರಾಜ್ಯದಲ್ಲಿ 2018-19ನೇ ಸಾಲಿನಲ್ಲಿ ಒಟ್ಟು 176 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಪ್ರಾರಂಭಿಸಿದ್ದು ಇದರ ಪ್ರಮುಖ ಉದ್ದೇಶ ಸರಕಾರಿ ಶಾಲೆಗಳ ಗುಣಮಟ್ಟವನ್ನು ಉತ್ತಮಪಡಿಸಿ ಶಾಲೆಗಳಲ್ಲಿ ಕನಿಷ್ಠ ಶೇ.75 ರಷ್ಟು ವಿದ್ಯಾರ್ಥಿಗಳು ಶೇ.75 ರಷ್ಟು ನಿಗದಿತ ಕಲಿಕಾ ಸಾಮರ್ಥ್ಯವನ್ನು ಹೊಂದುವುದು ಮತ್ತು ಉಳಿದ ವಿದ್ಯಾರ್ಥಿಗಳೂ ನಿಗದಿಪಡಿಸಿದ ಕಲಿಕಾ ಸಾಮರ್ಥ್ಯಗಳಲ್ಲಿ ಕನಿಷ್ಠ ಶೇ.50 ರಷ್ಟು ಗಳಿಸುವುದಾಗಿದೆ. ಇದರ ಜೊತೆಗೆ ಮಕ್ಕಳ ಕಲಿಕಾ ಸಾಮರ್ಥ್ಯವನ್ನು ಮೌಲ್ಯಮಾಪನ ಮಾಡಲು ವಿಶ್ವಾಸಾರ್ಹ ವ್ಯವಸ್ಥೆಯನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿದೆ.

ಪ್ರಾಥಮಿಕ, ಪ್ರೌಢ ಮತ್ತು ಪದವಿಪೂರ್ವ ಸಂಸ್ಥೆಗಳನ್ನು ಆಡಳಿತಾತ್ಮಕ, ಶೈಕ್ಷಣಿಕ ಮತ್ತು ಕ್ರಿಯಾತ್ಮಕ ಸಂಯೋಜನೆಯೊಂದಿಗೆ ಒಟ್ಟುಗೂಡಿಸಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಉತ್ಕೃಷ್ಟ ದರ್ಜೆಯ ಸೌಲಭ್ಯಗಳನ್ನೊಳಗೊಂಡ ಮಾದರಿ ಶಾಲೆಯನ್ನಾಗಿ ರೂಪಿಸಲು ಯೋಜನೆ ರೂಪಿಸಿ ಅನುಷ್ಠಾನಗೊಳಿಸಲಾಗುತ್ತಿದೆ. 2019-20 ನೇ ಸಾಲಿನಲ್ಲಿ ಇಲಾಖಾ ಮಾರ್ಗಸೂಚಿಯನ್ವಯ ಮೂಲಭೂತ ಸೌಲಭ್ಯ ಹಾಗೂ ಮಾನವ ಸಂಪನ್ಮೂಲಗಳ ಸಮರ್ಪಕ ನಿರ್ವಹಣೆಗಾಗಿ ವಿಸ್ಕ್ರತವಾದ ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಕೆಳಗಿನ ೭ ಶಾಲೆಗಳು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ ಕಾರ್ಯನಿರ್ವಹಿಸುತ್ತಿವೆ.

. ಕರ್ನಾಟಕ ಪಬ್ಲಿಕ್ ಶಾಲೆ ಮುತ್ತೂರು

. ಕರ್ನಾಟಕ ಪಬ್ಲಿಕ್ ಶಾಲೆ ಬೆಳ್ಳಾರೆ

. ಕರ್ನಾಟಕ ಪಬ್ಲಿಕ್ ಶಾಲೆ ಕುಂಬ್ರ

.ಕರ್ನಾಟಕ ಪಬ್ಲಿಕ್ ಶಾಲೆ ಮಿಜಾರು

.ಕರ್ನಾಟಕ ಪಬ್ಲಿಕ್ ಶಾಲೆ ಕನ್ಯಾನ

.ಕರ್ನಾಟಕ ಪಬ್ಲಿಕ್ ಶಾಲೆ ಕೆಯ್ಯೂರು

.ಕರ್ನಾಟಕ ಪಬ್ಲಿಕ್ ಶಾಲೆ ಪುಂಜಾಲಕಟ್ಟೆ

. ಕರ್ನಾಟಕ ಪಬ್ಲಿಕ್ ಶಾಲೆ ಗಾಂಧಿ ನಗರ

. ಕರ್ನಾಟಕ ಪಬ್ಲಿಕ್ ಶಾಲೆ ಮೊಂಟೆ ಪದವು

 

 

 

 

ಇತ್ತೀಚಿನ ನವೀಕರಣ​ : 07-02-2021 10:29 PM ಅನುಮೋದಕರು: Admin



ಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

  • ಹಕ್ಕುಸ್ವಾಮ್ಯ ನೀತಿ
  • ಬಾಹ್ಯಜಾಲತಾಣ ಸಂಪರ್ಕ ನೀತಿ
  • ಭದ್ರತಾ ನೀತಿ
  • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

  • ಇತ್ತೀಚಿನ ನವೀಕರಣ​ :
  • ಸಂದರ್ಶಕರು :
  • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸಂಸ್ಥೆ ಮಂಗಳೂರು
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2024, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080